Home Advertisement
Home ನಮ್ಮ ಜಿಲ್ಲೆ ಗದಗ ಉತ್ತರ ಕರ್ನಾಟಕ ಸಮಸ್ಯೆ ಕುರಿತು ಮೂರು ದಿನ ಚರ್ಚೆ

ಉತ್ತರ ಕರ್ನಾಟಕ ಸಮಸ್ಯೆ ಕುರಿತು ಮೂರು ದಿನ ಚರ್ಚೆ

0
99

ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಚರ್ಚೆ ನಡೆಸಲಾಗುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಕ್ಫ್ ವಿಚಾರದಲ್ಲಿ ಬಿ.ವೈ. ವಿಜಯೇಂದ್ರ 150 ಕೋಟಿ ಆ ಮಿಷದ ಒಡ್ಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು.

ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳ್ತಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಾಗಿದ್ರೆ CBI ತನಿಖೆಗೆ ಕೊಡ್ಲಿ ಎಂದರು. ವಿಡಿಯೋದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರತ್ತೆ ತಾನೇ ಎಂದು ಸಿಎಂ ಪ್ರಶ್ನಿಸಿದರು.

Previous articleವಿಜಯೇಂದ್ರ ಅಧ್ಯಕ್ಷರನ್ನಾಗಿ ಮುಂದುವರಿಸಲು ನಿಷ್ಠರ ಸಭೆ ನಿರ್ಣಯ
Next articleʻಅವ್ವʼ ಪ್ರಶಸ್ತಿ ಪ್ರದಾನ ರಾಜ್ಯಕ್ಕೆ ಮಾದರಿ