ರಾಯಚೂರು: ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮಾವ ಬಳಿಕ ಆಕೆಯನ್ನೇ ಬರ್ಬರವಾಗಿ ಕೊಲೆಗೈದ ಘಟನೆ ರಾಯಚೂರಿನ ಜುಲಮಗೇರಾ ಗ್ರಾಮದಲ್ಲಿ ನಡೆದಿದೆ.
ದುಳ್ಳಮ್ಮ(27) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಸಂತುಳ್ಳ ರಾಮಲಿಂಗಯ್ಯ ಕುಂಡಪಾಲಯ್ಯ(55) ಆರೋಪಿ ಎಂದು ಹೇಳಲಾಗಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಸೊಸೆಯ ಮೇಲೆ ಅತ್ಯಾಚಾರ ಎಸಗಲು ಮಾವ ಮುಂದಾಗಿದ್ದ. ಈ ವೇಳೆ ಸೊಸೆ ನಿರಾಕರಿಸಿದ್ದರಿಂದ ಸಲಾಕೆಯಿಂದ ಆಕೆಯ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಈ ಕುರಿತಂತೆ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.