ನವದೆಹಲಿ: ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಫಿಟ್ ಇಂಡಿಯಾ ಸೈಕ್ಲಿಂಗ್ ಆಂದೋಲನಕ್ಕೆ ಚಾಲನೆ ನೀಡಿದರು.
ಫಿಟ್ ಇಂಡಿಯಾ ಆಂದೋಲನದ ಭಾಗವಾಗಿ ಪ್ರಾರಂಭಿಸಲಾದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಗಣ್ಯ ಕ್ರೀಡಾಪಟುಗಳು, ಫಿಟ್ನೆಸ್ ಉತ್ಸಾಹಿಗಳು ಮತ್ತು ರಾಜಕೀಯ ಮುಖಂಡರು ಭಾಗವಹಿಸಿದ್ದರು. ಯುವಕರಲ್ಲಿ ಫಿಟ್‌ನೆಸ್‌ನ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ ಸೂರ್ಯ, ಯುವಕರು ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಿದರು. ಫಿಟ್ನೆಸ್ ಮಾನಸಿಕ ಸ್ಪಷ್ಟತೆಯನ್ನು ಸುಧಾರಿಸುವದರ ಜೋತೆಗೆ ಜೀವನದಲ್ಲಿ ಶಿಸ್ತು, ಪರಿಶ್ರಮ ಮತ್ತು ಸ್ಥಿರತೆಯನ್ನು ಹುಟ್ಟುಹಾಕುತ್ತದೆ ಎಂದರು.