ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದೆ. ಸಮ್ಮೇಳನ ಪ್ರಾರಂಭಕ್ಕೆ ಕ್ಷಣಗಣನೆ ಶುರುವಾಗಿದ್ದು, ಇಂದು ಮಂಡ್ಯದ ಸಾಂಜೋ ಆಸ್ಪತ್ರೆ ಬಳಿ ಸಮ್ಮೇಳನಾಧ್ಯಕ್ಷರಾದ ಗೊ.ರು ಚನ್ನಬಸಪ್ಪ ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಮ್ಮೇಳನಾಧ್ಯಕ್ಷರನ್ನು ಬರಮಾಡಿಕೊಂಡರು. ಸ್ವಾಗತಕ್ಕೆ ಜಾನಪದ ಕಲಾತಂಡಗಳು, ಗಾರುಡಿ ಗೊಂಬೆಗಳ ಮೆರಗು ನೀಡಿದ್ದವು.
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಮಹೇಶ್ ಜೋಶಿ, ಶಾಸಕರಾದ ನರೇಂದ್ರ ಸ್ವಾಮಿ, ರವಿಕುಮಾರ್(ಗಣಿಗ) ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತನ್ವೀರ್ ಆಸೀಫ್ ಮತ್ತಿತರರು ಉಪಸ್ಥಿತರಿದ್ದರು.