ಸಾಹಿತ್ಯ ವೇದಿಕೆ ರಾಜಕೀಯ ವೇದಿಕೆಯಾಗಿ ಮಾಡಿಕೊಂಡಿದ್ದು ಘನ ಸಾಧನೆ

0
26

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ರಾಜಕೀಯ ವೇದಿಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮಾನ್ಯ ಮುಖ್ಯ ಮಂತ್ರಿಗಳು ಮನು ಸ್ಮೃತಿ, ತೆರಿಗೆ ವಂಚನೆ, ಗ್ಯಾರಂಟಿ ಯೋಜನೆಗಳ ಪ್ರಚಾರ, ಹಿಂದಿ ಹೇರಿಕೆ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡಿ ಸಾಹಿತ್ಯ ವೇದಿಕೆಯನ್ನು ರಾಜಕೀಯ ವೇದಿಕೆಯಾಗಿ ಮಾಡಿಕೊಂಡಿದ್ದು ಇವರ ಘನ ಸಾಧನೆ. ಕನ್ನಡ ಕಾವಲು ಸಮಿತಿಯ ಮೊದಲನೇ ಅಧ್ಯಕ್ಷರು, ವ್ಯಾಕರಣದ ಮೇಷ್ಟ್ರು ಹಾಕಿಕೊಡುವ ಮೇಲ್ಪಂಕ್ತಿಯಿದು. ತಾಯಿ ಭುವನೇಶ್ವರಿಯು ಇವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದಿದ್ದಾರೆ.

Previous articleಉತ್ತರ ಕರ್ನಾಟಕ: ಕೈಗಾರಿಕಾ ಬೆಳವಣಿಗೆಯ ಹೊಸ ಯುಗದ ಆರಂಭ
Next articleಸಿರಿಧಾನ್ಯ ಅತ್ಯಂತ ಆರೋಗ್ಯಯುತ ಆಹಾರ