ಪರಿಸರದ ಮೇಲೆ ಆಗಿರುವ ದುಷ್ಪರಿಣಾಮಗಳ ಬಗ್ಗೆ ಸರ್ಕಾರದ ಗಮನದಲ್ಲಿದೆ ಎಂದು ಭಾವಿಸುತ್ತೇನೆ
ಬೆಂಗಳೂರು: ರೈತರ ಆಶಯಗಳಿಗೆ ವಿರುದ್ಧವಾಗಿ KIADB ಭೂ ಸ್ವಾಧೀನ ಪಡಿಸಿಕೊಳ್ಳುವ ಕಾರ್ಯಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ ಈ ಕುರಿತು ಸಂಸದ ಡಾ.ಮಂಜುನಾಥ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ
ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಅಲ್ಲಿನ ಸ್ಥಳೀಯ ರೈತರ ಆಶಯಗಳಿಗೆ ವಿರುದ್ಧವಾಗಿ KIADB ವತಿಯಿಂದ ಕೈಗಾರಿಕಾ ಹಬ್ ನಿರ್ಮಿಸುವ ಸಲುವಾಗಿ ಸ್ವಾಧೀನ ಪಡಿಸಿಕೊಳ್ಳುವ ಕಾರ್ಯಕ್ಕೆ ಮುಂದಾಗಿದೆ ಇದನ್ನು ವಿರೋಧಿಸಿ ಈಗಾಗಲೇ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಈಗಾಗಲೇ ಹೋರಾಟ ನಡೆಸುತ್ತಿದೆ. ಈ ಪ್ರದೇಶವು ಈಗಾಗಲೇ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿದಂತೆ ಸರ್ಕಾರದಿಂದ ನಿರ್ಮಾಣಗೊಂಡಿರುವ ಪ್ರತಿಷ್ಠಿತ ಬಡಾವಣೆಗಳು ಹಾಗೂ ಸಾಕಷ್ಟು ಕೆರೆಗಳನ್ನು ಹೊಂದಿದೆ. ಇದಲ್ಲದೇ ಈಗಾಗಲೇ ಸರ್ಕಾರದಿಂದ ಈ ಭಾಗದಲ್ಲಿ ಸರ್ಕಾರದಿಂದ ಅಭಿವೃದ್ಧಿಪಡಿಸಲಾಗಿರುವ 4 ಪ್ರತಿಷ್ಠಿತ ಕೈಗಾರಿಕಾ ಪ್ರದೇಶಗಳಿಂದಾಗಿ ಪರಿಸರದ ಮೇಲೆ ಆಗಿರುವ ದುಷ್ಪರಿಣಾಮಗಳ ಬಗ್ಗೆ ಸರ್ಕಾರದ ಗಮನದಲ್ಲಿದೆ ಎಂದು ಭಾವಿಸುತ್ತೇನೆ. ಕೈಗಾರಿಕರಣದಿಂದಾಗಿ ದೆಹಲಿ ಸೇರಿದಂತೆ ಅನೇಕ ನಗರಗಳಲ್ಲಿ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳು ನಮ್ಮ ಕಣ್ಮುಂದಿದೆ.
ಈ ಎಲ್ಲವನ್ನೂ ಗಮನಿಸಿ ಸರ್ಕಾರ ಪರಿಸರ ಮತ್ತು ಅಲ್ಲಿನ ರೈತರ ಹಿತದೃಷ್ಟಿಯಿಂದ ಈ ಪ್ರದೇಶದಲ್ಲಿ ಯಾವುದೇ ಭೂಸ್ವಾಧೀನಕ್ಕೆ ಅನುವು ಮಾಡಿಕೊಡದೆ ಈ ಪ್ರದೇಶವನ್ನು ಹಸಿರು ವಲಯವೆಂದು ಘೋಷಿಸಿ ಸದರಿ ಪ್ರದೇಶದಲ್ಲಿ ಅನಧಿಕೃತ ಬಡಾವಣೆಗಳನ್ನು ಅಥವಾ ಕೈಗಾರಿಕೆಗಳನ್ನು ನಿಷೇಧಿಸಬೇಕೆಂದು ಎಂದು ವಿನಂತಿದ್ದಾರೆ.