ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ವೈರಸ್ ಪತ್ತೆ

ಬೆಂಗಳೂರು: ನಗರದಲ್ಲಿ ಮೊದಲ HMPV ವೈರಸ್ ಪ್ರಕರಣ ಪತ್ತೆಯಾಗಿದೆ.
8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದ್ದು. ಜ್ವರ ಬಂದ ಹಿನ್ನಲೆಯಲ್ಲಿ ಮಗುವನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ರಕ್ಷ ಪರೀಕ್ಷೆಯಲ್ಲಿ HMPV ವೈರಸ್ ಪತ್ತೆಯಾಗಿದೆ. ಇದು ಕರ್ನಾಟಕದ ಹಾಗೂ ಭಾರತದ ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ. ಕಳೆದೆ ಕೆಲ ದಿನಗಳಿಂದ 8 ತಿಂಗಳ ಮಗುವಿನಲ್ಲಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ವೈದ್ಯರು ಮಗುವಿನ ರಕ್ಷ ಪರೀಕ್ಷೆ ಮಾಡಿದಾಗ HMPV ವೈರಸ್ ಪತ್ತೆಯಾಗಿದೆ. ಮೊದಲ ಪ್ರಕರಣ ವರದಿಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಮತ್ತಷ್ಟು ಅಲರ್ಟ್ ಆಗಿದ್ದು HMPV ವೈರಸ್‌ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಈ ವೈರಸ್‌ ತಗುಲಿದರೆ ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ. ಸದ್ಯ ಆತಂಕದ ಪರಿಸ್ಥಿತಿ ಇಲ್ಲ. ಮಕ್ಕಳು ಹಾಗೂ ಹಿರಿಯರು ಹೆಚ್ಚು ಕಾಳಜಿ ವಹಿಸುವಂತೆ ಸೂಚಿಸಿದ್ದಾರೆ.

HMPV ಕೇಂದ್ರಕ್ಕೆ ಮಾಹಿತಿ: ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸಿ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ಸೂಚಿಸಿದೆ.