ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

0
34

ಫೆ. 5ರಂದು ಒಂದೇ ಹಂತದಲ್ಲಿ ಚುನಾವಣೆ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.
ಫೆ. 5ರಂದು ಒಂದೇ ಹಂತದಲ್ಲಿ ದೆಹಲಿಯ 70 ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ, ಜನವರಿ 10ರಂದು ನಾಮಪತ್ರ ಸಲ್ಲಿಕೆ ಆರಂಭ ಆಗಲಿದ್ದು, ನಾಮಪತ್ರ ಸಲ್ಲಿಕೆಗೆ ಜನವರಿ 17 ಕೊನೆಯ ದಿನಾಂಕವಾಗಿದೆ, ಇನ್ನು ಜನವರಿ 18 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಜನವರಿ 20 ಕೊನೆಯ ದಿನವಾಗಿರುತ್ತದೆ. ಫೆ.08ರಂದು 70 ಕ್ಷೇತ್ರಗಳ ಚುನಾವಣೆ ಫಲಿತಾಂಶ ಘೋಷಣೆಯಾಗಲಿದೆ.

Previous articleಮಂಗಳೂರಿಗೆ ಬಂದ ಉಪರಾಷ್ಟ್ರಪತಿ
Next articleಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ RADAR ಸ್ಥಾಪನೆ