ಹುಬ್ಬಳ್ಳಿ: ಜನವರಿ ೧೭ರಿಂದ ಏಪ್ರಿಲ್ ೧೬ರವರೆಗೆ ೯೦ ದಿನಗಳ ಕಾಲ, ಕ್ಯಾಸಲ್ ರಾಕ್-ಕುಲೆಮ್ ಭಾಗದಲ್ಲಿ ಹಳಿ ನಿರ್ವಹಣೆ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವ ಹಿನ್ನಲೆ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದತಿ ಮತ್ತು ಬೇರೆ ಮಾರ್ಗದ ಮೂಲಕ ಚಲಿಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ರೈಲುಗಳ ಸಂಚಾರ ಭಾಗಶಃ ರದ್ದು:
ಜನವರಿ ೧೬ ರಿಂದ ಏಪ್ರಿಲ್ ೧೫ ರವರೆಗೆ ಶಾಲಿಮಾರ್ ನಿಲ್ದಾಣದಿಂದ ಹೊರಡುವ ರೈಲು (ರೈಲು ಸಂಖ್ಯೆ ೧೮೦೪೭) ಶಾಲಿಮಾರ್-ವಾಸ್ಕೋ ಡ ಗಾಮಾ ಎಕ್ಸ್ ಪ್ರೆಸ್ ರೈಲು ಹುಬ್ಬಳ್ಳಿ ನಿಲ್ದಾಣದವರೆಗೂ ಮಾತ್ರ ಸಂಚರಿಸಲಿದೆ. ಹುಬ್ಬಳ್ಳಿ ಮತ್ತು ವಾಸ್ಕೋ ಡ ಗಾಮಾ ನಿಲ್ದಾಣಗಳ ನಡುವಿನ ಸಂಚಾರ ಭಾಗಶಃ ರದ್ದಾಗಿದೆ. ಈ ರೈಲು ಹುಬ್ಬಳ್ಳಿಯಲ್ಲಿ ಕೊನೆಗೊಳ್ಳಲಿದೆ.
ವಾಸ್ಕೋ ಡ ಗಾಮಾ-ಶಾಲಿಮಾರ್ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ ೧೮೦೪೮ ) ಜನವರಿ ೧೯ ರಿಂದ ಏಪ್ರಿಲ್ ೧೮ ರವರೆಗೆ ವಾಸ್ಕೋ ಡ ಗಾಮಾ ನಿಲ್ದಾಣದ ಬದಲು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಹೊರಡಲಿದ್ದು, ವಾಸ್ಕೋ ಡ ಗಾಮಾ ಮತ್ತು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಂಡಿದೆ.
ಜನವರಿ ೧೬, ೨೩, ೩೦; ಫೆಬ್ರವರಿ ೬, ೧೩, ೨೦, ೨೭; ಮಾರ್ಚ್ ೬, ೧೩, ೨೦, ೨೭; ಮತ್ತು ಏಪ್ರಿಲ್ ೩, ೧೦, ೨೦೨೫ ರಂದು ಹೊರಡುವ ರೈಲು (ರೈಲು ಸಂಖ್ಯೆ ೧೭೪೧೯/೧೭೦೨೧) ತಿರುಪತಿ / ಹೈದರಾಬಾದ್-ವಾಸ್ಕೋ ಡ ಗಾಮಾ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಹುಬ್ಬಳ್ಳಿ ಮತ್ತು ವಾಸ್ಕೋ ಡ ಗಾಮಾ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲಿನ ಸಂಚಾರ ಹುಬ್ಬಳ್ಳಿಯಲ್ಲಿ ಕೊನೆಗೊಳ್ಳುತ್ತದೆ.
ವಾಸ್ಕೋ ಡ ಗಾಮಾ-ತಿರುಪತಿ/ಹೈದರಾಬಾದ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ ೧೭೪೨೦/೧೭೦೨೨) ಜನವರಿ ೧೭, ೨೪, ೩೧, ಫೆಬ್ರವರಿ ೭, ೧೪, ೨೧, ೨೮; ಮಾರ್ಚ್ ೭, ೧೪, ೨೧, ೨೮; ಮತ್ತು ಏಪ್ರಿಲ್ ೪, ೧೧ ರಂದು ವಾಸ್ಕೋ ಡ ಗಾಮಾ ಮತ್ತು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ ಎಂದು ತಿಳಿಸಲಾಗಿದೆ.
ಜನವರಿ ೧೭ ರಿಂದ ಏಪ್ರಿಲ್ ೧೬ ರವರೆಗೆ ಸಿಕಂದರಾಬಾದ್ ನಿಲ್ದಾಣದಿಂದ ಹೊರಡುವ ರೈಲು (ರೈಲು ಸಂಖ್ಯೆ ೧೭೦೩೯) ಸಿಕಂದರಾಬಾದ್-ವಾಸ್ಕೋ ಡ ಗಾಮಾ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ವಾಸ್ಕೋ ಡ ಗಾಮಾ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಹುಬ್ಬಳ್ಳಿಯಲ್ಲಿ ಕೊನೆಗೊಳ್ಳಲಿದೆ.
ವಾಸ್ಕೋ ಡ ಗಾಮಾ-ಸಿಕಂದರಾಬಾದ್ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ ೧೭೦೪೦) ಜನವರಿ ೧೮ ರಿಂದ ಏಪ್ರಿಲ್ ೧೭ ರವರೆಗೆ ವಾಸ್ಕೋಡಗಾಮಾ ನಿಲ್ದಾಣದ ಬದಲಿಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಡುತ್ತದೆ, ವಾಸ್ಕೋಡಗಾಮಾ ಮತ್ತು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.