Home Advertisement
Home ಅಪರಾಧ ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು

ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು

0
95

ಮಂಗಳೂರು: ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ನಡೆದಿದೆ.
ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು.
ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರತೆಗೆದಿದ್ದಾರೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಗಿದೆ. ಭಾನುವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ. ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ಗೆ ತೆರಳಿದ್ದರು. ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ.

Previous articleಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆ
Next articleಅಧಿಕಾರ ಮದದಿಂದ ರಾಜಕಾರಣ ಮಾಡುವವರಿಗೆ ಸತ್ಯ ಅರ್ಥವಾಗದು