Home Advertisement
Home ತಾಜಾ ಸುದ್ದಿ ನಾಡಿನ ರೈತರ ಕಷ್ಟಕ್ಕೆ ಸ್ಪಂದಿಸುವವರು ಯಾರು?

ನಾಡಿನ ರೈತರ ಕಷ್ಟಕ್ಕೆ ಸ್ಪಂದಿಸುವವರು ಯಾರು?

0
118

ರೈತರ ಬದುಕು ಸುಭದ್ರ ಪಡಿಸಬೇಕಾದ ತಾವು, ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವುದರಲ್ಲೇ ಕಾಲ ಕಳೆದರೆ,

ಬೆಂಗಳೂರು: ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರೇ, ನಾಡಿನ ರೈತರ ಬದುಕು ಸುಭದ್ರ ಪಡಿಸಬೇಕಾದ ತಾವು, ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವುದರಲ್ಲೇ ಕಾಲ ಕಳೆದರೆ, ನಾಡಿನ ರೈತರ ಕಷ್ಟಕ್ಕೆ ಸ್ಪಂದಿಸುವವರು ಯಾರು? ನಿಮ್ಮ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ? ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದಿದ್ದಾರೆ.

Previous articleಇಂದು ರಾಜ್ಯಮಟ್ಟದ ಪ್ರಬಂಧ ಮತ್ತು ಭಾಷಣ ಸ್ಪರ್ಧೆ
Next articleಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಯಾವಾಗ?