ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ತೋಂಟದ ಸಿದ್ದರಾಮ ಮಹಾಸ್ವಾಮಿಗಳು

ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನ ಗದಗ-ಡಂಬಳ ತೋಂಟದಾರ್ಯ ಮಠದ ಜಗದ್ಗುರುಗಳಾದ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು.