ಸುಮಾರು 5 ಕೋಟಿ ಕಬ್ಬು ಬೆಳೆಗಾರರಿಗೆ ಹಾಗೂ ಸಕ್ಕರೆ ಕಾರ್ಖಾನೆಗಳ 5 ಕೋಟಿ ಕಾರ್ಮಿಕರಿಗೆ ನೆರವಾಗಲಿದೆ
ಬೆಂಗಳೂರು: 2024-25ರ ಸಾಲಿನ ಸೆಪ್ಟೆಂಬರ್ ಋತುವಿನವರೆಗೆ 10 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ಇಂದು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಸಕ್ಕರೆ ದರದಲ್ಲಿ ಸ್ಥಿರತೆ ಖಾತ್ರಿಯಾಗಲಿದ್ದು, ರೈತರಿಗೆ ಸಕಾಲದಲ್ಲಿ ಹಣ ಪಾವತಿ ಮಾಡಲು ನೆರವಾಗಿಲಿದೆ, ಸರ್ಕಾರದ ಈ ನಿರ್ಧಾರದಿಂದ ಸುಮಾರು 5 ಕೋಟಿ ಕಬ್ಬು ಬೆಳೆಗಾರರಿಗೆ ಹಾಗೂ ಸಕ್ಕರೆ ಕಾರ್ಖಾನೆಗಳ 5 ಕೋಟಿ ಕಾರ್ಮಿಕರಿಗೆ ನೆರವಾಗಲಿದೆ. ಅಲ್ಲದೆ ಮಾರುಕಟ್ಟೆಯಲ್ಲಿ ಅಗತ್ಯ ಪ್ರಮಾಣದಲ್ಲಿ ಸಕ್ಕರೆ ಲಭ್ಯತೆ ಮತ್ತು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಸಕ್ಕರೆ ಖರೀದಿ ಸಾಧ್ಯವಾಗಲಿದೆ ಎಂದಿದ್ದಾರೆ.