ಯಲ್ಲಾಪುರ ಅರೆಬೈಲ್ ಘಾಟ್ ಬಳಿ ಭೀಕರ ಅಪಘಾತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

0
18

ಹುಬ್ಬಳ್ಳಿ: ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಇಂದು ಸಂಭವಿಸಿದ ವಾಹನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಹಾವೇರಿ ಜಿಲ್ಲೆಯ ಸವಣೂರಿನಿಂದ ಕುಮಟಾದ ಸಂತೆಗೆ ತೆರಳುತ್ತಿದ್ದ ಲಾರಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವ್ಯಾಪಾರಸ್ಥರು ಇದ್ದರು. ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಲಾರಿ ಕಂದಕಕ್ಕೆ ಉರುಳಿದೆ‌. ಪರಿಣಾಮ ಲಾರಿಯಲ್ಲಿದ್ದ 9 ಕ್ಕೂ ಹೆಚ್ಚು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇನ್ನು ಗಾಯಗೊಂಡವರನ್ನು ಯಲ್ಲಾಪುರ ತಾಲ್ಲೂಕು ಆಸ್ಪತ್ರೆ ಮತ್ತು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆತರಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಕರೆತಂದ ಗಾಯಾಳುಗಳ ಪೈಕಿ ಜಲಾಲ್ ಬಾಷಾ (26) ಕೊನೆಯುಸಿರಿಳೆದಿದ್ದಾನೆ.

ಇನ್ನುಳಿದವರ ಸ್ಥತಿಯೂ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದು ವರೆದಿದೆ.

ಮೃತಪಟ್ಟವರು ಫಯಾಜ್‌ ಜಮಖಂಡಿ (45), ವಾಸಿಂ ಮುಡಗೇರಿ (35), ಹಿಜಾಜ್‌ಮುಲ್ಲಾ (20), ಸಾಧಿಕ್‌ ಭಾಷ (30), ಗುಲಾಂ ಹುಸೇನ್‌ ಜವಳಿ (40), ಇಮ್ತಿಯಾಜ್‌ (36), ಅಲ್ಫಾಜ್‌ ಜಾಫರ್‌ (25), ಜಿಲಾನಿ ಅಬ್ದುಲ್‌ (28), ಅಸ್ಲಂ (24), ಜಲಾಲ್ ಬಾಷಾ (26)

Previous articleಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿದೆ.
Next articleಯಲ್ಲಾಪುರ ಬಳಿ ಲಾರಿ ಪಲ್ಟಿ: ಸವಣೂರಿನ ತರಕಾರಿ ವ್ಯಾಪಾರಿಗಳ ಸಾವು