ನವದೆಹಲಿ : ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ.
ಕರ್ನಾಟಕ ರಾಜ್ಯದ ಮೂವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಡಾ. ವಿಜಯಲಕ್ಷ್ಮಿ ದೇಶಮಾನೆ, ವೆಂಕಪ್ಪ ಅಂಬಾಜೀ ಸುಗಟ್ಕೇರ್ ಹಾಗೂ ಭೀಮವ್ವ ದೊಡ್ಡ ಬಾಲಪ್ಪಗೆ ಪ್ರಶಸ್ತಿ ಲಭಿಸಿದೆ.
ವಿಜಯಲಕ್ಷ್ಮೀ ದೇಶಮಾನೆ ಪರಿಚಯ : ಕಲಬರುಗಿ ಜಿಲ್ಲೆಯಲ್ಲಿ ಜನಿಸಿದ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ಎರಡು ದಶಕಗಳಿಂದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳ ರೋಗನಿವಾರಣೆಗಾಗಿ ಶ್ರಮಿಸುತ್ತಿದ್ದಾರೆ. ಕಲಬರುಗಿ ಜಿಲ್ಲೆಯಲ್ಲಿ ಜನಿಸಿದ ಇವರು,
೧೯೮೦ರಲ್ಲಿ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ವೈದ್ಯಕೀಯ ಪದವಿ ಪಡೆದವರು. ೧೯೮೫ರಲ್ಲಿ ಬಳ್ಳಾರಿಯ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೮೫ರಲ್ಲಿ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ರ್ಆಸ್ಪತ್ರೆಗೆ ಸೇರಿದರು. ೧೯೮೯ರಲ್ಲಿ ಮುಂಬಯಿನ ಟಾಟಾ ಸ್ಮಾರಕ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ತರಬೇತಿ ನಂತರ ಅವರು ೧೯೯೩ರಲ್ಲಿ ಭಾರತೀಯ ಶಸ್ತ್ರಚಿಕಿತ್ಸಕರ ಸಂಘದ ಎಫ್ಎಐಎಸ್ ಫೆಲೋಶಿಪ್ಗೆ ಪಾತ್ರರಾದರು. ಕಿದ್ವಾಯಿ ಸ್ಮಾರಕಕ್ಯಾನ್ಸರ್ ಸಂಸ್ಥೆಯ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕಿ, ಮುಖ್ಯಸ್ಥೆ, ಸಂಸ್ಥೆಯ ನರ‍್ದೇಶಕಿಯೂ ಆದರು. ಸ್ತನ ಕ್ಯಾನ್ರ‍್ಕುರಿತು ಜಾಗೃತಿಅಭಿಯಾನ. ಸಂಶೋಧನಾತ್ಮಕ ಲೇಖನ-ಪುಸ್ತಕಗಳನ್ನು ಪ್ರಕಟಿಸಿದರು. ಕರ್ನಾಟಕ ಕ್ಯಾನ್ಸರ್ ಸೊಸೈಟಿಯ ಉಪಾಧ್ಯಕ್ಷೆಯಾಗಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಮಹಿಳಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಅಂತಾರಾಷ್ಟ್ರೀಯ ವಲಯ ರಾಷ್ಟ್ರೀಯರತ್ನ, ಕೆಂಪೇಗೌಡ ಪ್ರಶಸ್ತಿಗಳಿಗೆ ಭಾಜನರಾದರು, ಹಿಂದುಳಿದ ಕುಟುಂಬದಿಂದ ಬಂದು, ಕ್ಯಾನ್ಸರ್ ರೋಗಕ್ಕೆ ತುತ್ತಾದವರ ಸೇವೆಗಾಗಿ ತ್ಯಾಗ, ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಾಮಾಜಿಕ ಕಳಕಳಿಯಿಂದ ಸೇವೆ ಸಲ್ಲಿಸುತ್ತಿದ್ದಾರೆ.

ವೆಂಕಪ್ಪ ಸಂಬಾಜಿ ಸುಗತೇಕರ್ ಪರಿಚಯ: ಶಾಲೆಗೆ ಹೋಗದ ವೆಂಕಪ್ಪ ಅಂಬಾಜಿ ಸಾವಿರಕ್ಕೂ ಅಧಿಕ ತತ್ವಪದ, ದೇವಿ ಪದ ಹಾಗೂ ಇತರ ವಿಷಯಗಳ ಮೇಲೆ ಪದಗಳನ್ನು ಹಾಡಿದ್ದಾರೆ. ಬಾಗಲಕೋಟೆ ನಿವಾಸಿಯಾದ ವೆಂಕಪ್ಪ ಅಂಬಾಜಿ ಸುಗತೇಕರ್ ಜಾನಪದವನ್ನು ಪ್ರಧಾನಿ ನರೇಂದ್ರ ಮೋದಿ 110ನೇ ಮನ್ ಕೀ ಬಾತ್ ರೇಡಿಯೋ ಸರಣಿಯಲ್ಲೂ ಗುಣಗಾನ ಮಾಡಿದ್ದರು. ಸಾವಿರಾರು ಜನರಿಗೆ ಅವರು ಗೊಂದಲಿ ಹಾಡುವುದನ್ನು ಕಲಿಸಿದ್ದಾರೆ. ಕರ್ನಾಟಕ ಸರ್ಕಾರ 2022ರಲ್ಲಿ ಗೊಂದಲಿ ಪದ ಸೇವೆಗೆ ಜನಪದ ವಿವಿಯಿಂದ ಗೌರವ ಡಾಕ್ಟರೇಟ್ ಕೂಡ ಪ್ರದಾನ ಮಾಡಿತ್ತು. ರಾಜ್ಯ ಸರಕಾರದಿಂದ ಈ ಹಿಂದೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ವೆಂಕಪ್ಪ ಅವರಿಗೆ ಸಂದಿವೆ.

ಭೀಮವ್ವ ಶಿಳ್ಳೇಕ್ಯಾತ ಪರಿಚಯ: ಭಾರತದ ಪುರಾತನ ಕಲೆಯಾದ ತೊಗಲುಗೊಂಬೆಯಾಟದ ಪ್ರದರ್ಶನದಿಂದ ಪ್ರೇಕ್ಷಕರ ಮನಗೆದ್ದಿರುವ ಇವರು ಕೊಪ್ಪಳದ ಸಾಂಪ್ರದಾಯಿಕ ಶಿಳ್ಳೇಕ್ಯಾತರ ಕುಟುಂಬದವರಾಗಿದ್ದಾರೆ. ತೊಗಲುಗೊಂಬೆ ಕಲಾವಿದರಾಗಿ ನಿರಂತರವಾಗಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪರದೆಯ ಹಿಂದೆ ಮಹಿಳಾ ಪಾತ್ರಗಳಿಗೆ ಧ್ವನಿ ತುಂಬುವ ಅಪರೂಪದ ಕಲಾವಿದೆಯಾದ ಭೀಮವ್ವ ದೊಡ್ಡಬಾಳಪ್ಪ ಅವರು ದೇಶ ವಿದೇಶಗಳಲ್ಲೂ ತಮ್ಮ ವೈವಿಧ್ಯಮಯ ತೊಗಲು ಗೊಂಬೆಯ ಪ್ರದರ್ಶನದಿಂದ ಪ್ರೇಕ್ಷಕರ ಮನಗೆದ್ದಿದ್ದಾರೆ. ಅಮೇರಿಕ, ಇರಾನ್, ಸ್ವಿಡರ್‌ಲ್ಯಾಂಡ್ ಮೊದಲಾದ ಭಾರತದ ಪುರಾತನ ಕಲೆಯಾದ ತೊಗಲುಗೊಂಬೆಯಾಟವನ್ನು ಪ್ರದರ್ಶಿಸುವ ತಂಡಗಳಲ್ಲಿ ಪ್ರಮುಖ ಸದಸ್ಯೆಯಾಗಿದ್ದಾರೆ.
