ಅರ್ಥಧಾರಿ ಬರೆ ಕೇಶವ ಭಟ್ಟ ನಿಧನ

ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ (84) ಇಂದು(25. 1. 25) ನಿಧನ ಹೊಂದಿದರು. ವೃತ್ತಿಯಲ್ಲಿ ಅಧ್ಯಾಪಕರಗಿದ್ದ ಕೇಶವ ಭಟ್ಟರು ಅರ್ಥಧಾರಿಯಾಗಿ,ಹವ್ಯಾಸಿ ವೇಷಧಾರಿಯಾಗಿ,ಕಲಾ ಸಂಯೋಜಕರಾಗಿ,ಕಲಾವಿಮರ್ಶಕರಾಗಿ, ಲೇಖಕರಾಗಿ ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದರು. ನಿವೃತ್ತಿಯ ಅನಂತರ ವಾಸುದೇವ ಸಾಮಗರ ಸಂಯಮಂ ತಂಡದಲ್ಲಿ ಕೆಲವು ವರ್ಷ ತಿರುಗಾಟ ಮಾಡಿದ್ದರು. ಅಪಾರ ಪುರಾಣ ಜ್ಞಾನ, ಭಾವಪೂರ್ಣ ಅರ್ಥಗಾರಿಕೆಯಿಂದ ಕಲಾಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದರು. ಸಂಸ್ಥೆಯ ತಾಳಮದ್ದಲೆ ಸಪ್ತಾಹದಲ್ಲಿ ಅರ್ಥಧಾರಿಯಾಗಿ, ಅವಲೋಕನಕಾರಾಗಿ ಸಹಕರಿಸಿದ್ದರು. ಹತ್ತು ವರ್ಷದ ಹಿಂದೆ ಸಂಸ್ಥೆ ಅವರಿಗೆ ಪೆರ್ಲ ಕೃಷ್ಣಭಟ್ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.