ಕರುನಾಡಿನ  9 ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಮುಖ್ಯಮಂತ್ರಿ ಅಭಿನಂದನೆ

0
31

ಬೆಂಗಳೂರು: 76ನೇ ವರ್ಷದ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪಿಟೀಲು ವಾದಕ ಲಕ್ಷ್ಮೀನಾರಾಯಣ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸೇರಿದಂತೆ ಕರ್ನಾಟಕದ ಒಟ್ಟು 9 ಮಂದಿ ಸಾಧಕರಿಗೆ 2025ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು ಲಭಿಸಿವೆ, ಕರುನಾಡಿನ ಎಲ್ಲಾ 9 ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು  ಕಲೆ, ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ, ವೈದ್ಯಕೀಯ, ವಿಜ್ಞಾನ ಮತ್ತು ತಂತ್ರಜ್ಞಾನ ಮುಂತಾದ ಕ್ಷೇತ್ರಗಳಲ್ಲಿನ ಅದ್ವಿತೀಯ ಸಾಧನೆಗಾಗಿ 2025ನೇ ಸಾಲಿನ ಪದ್ಮ ವಿಭೂಷಣ, ಪದ್ಮ ಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳಿಗೆ ಭಾಜನರಾಗಿರುವ ಕರುನಾಡಿನ ಎಲ್ಲಾ 9 ಸಾಧಕರಿಗೆ ಅಭಿನಂದನೆಗಳು.

ನಿಮ್ಮೆಲ್ಲರ ಕರ್ತವ್ಯ ನಿಷ್ಠೆ, ಸೇವಾ ಮನೋಭಾವ ಹಾಗೂ ಸಾಮಾಜಿಕ ಕಾಳಜಿ ಯುವ ಸಮುದಾಯಕ್ಕೆ ಮಾದರಿಯಾಗಿದೆ. ನಿಮ್ಮ ಸಾಧನೆ ಕಂಡು ಇಡೀ ನಾಡು ಹೆಮ್ಮೆ ಪಡುತ್ತಿದೆ ಎಂದಿದ್ದಾರೆ.

Previous articleಪೊಲೀಸ್ ಹೆಡ್‌ಕಾನ್ಸ್‌ಸ್ಟೇಬಲ್ ಶಿವಾನಂದಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ
Next articleಪೊಲೀಸ್ ಹೆಡ್‌ಕಾನ್ಸ್‌ಸ್ಟೇಬಲ್ ಶಿವಾನಂದಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ