​ಪ್ರಯಾಗ್‌ರಾಜ್‌ ಕುಂಭಮೇಳದಲ್ಲಿ ಭೂತಾನ್​ ದೊರೆ

​ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ನೆರೆಯ ದೇಶ ಭೂತಾನಿನ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಭೇಟಿ ನೀಡಿದ್ದಾರೆ.
ಪ್ರಯಾಗರಾಜ್‌ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಾರ್ಥನೆ ಸಲ್ಲಿಸಿದರು.ಇದಕ್ಕೂ ಮುನ್ನ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಕ್ನೋ ವಿಮಾನ ನಿಲ್ದಾಣದಲ್ಲಿ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರನ್ನು ಸ್ವಾಗತಿಸಿ ಹೂವಿನ ಗುಚ್ಛವನ್ನು ನೀಡಿದರು. ನಂತರ ಇಬ್ಬರು ಗಣ್ಯರು ಪ್ರಯಾಗ್‌ರಾಜ್‌ಗೆ ಪ್ರಯಾಣಿಸಲು ವಿಮಾನ ಹತ್ತಿದರು.