ಭೀಕರ ಅಪಘಾತ: ಪತಿ ಎದುರೇ ಪ್ರಾಣಬಿಟ್ಟ ವೈದ್ಯೆ

ಬೆಳಗಾವಿ: ಲಾರಿ – ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಪತಿ ಎದುರು ಪತ್ನಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ-ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ತಾಲೂಕಿನ ಹಿರೇಬಾಗೇವಾಡಿ ಸಮೀಪ ಈ ದುರ್ಘಟನೆ ನಡೆದಿದೆ. ಮೂಡಲಗಿ ತಾಲೂಕಿನ ಸಂಗನಕೇರಿಯ ಡಾ.ಆಶಾ ಕೋಳಿ (32) ಸ್ಥಳದಲ್ಲೇ ಸಾವನ್ನಪ್ಪಿದ್ದ ವೈದ್ಯೆ. ಆಶಾ ಅವರ ಪತಿ ಡಾ. ಭೀಮಪ್ಪ ಕೋಳಿ, ಚಾಲಕ ಮಹೇಶ ಖೋತ ಗಂಭೀರವಾಗಿ ಗಾಯಗೊಂಡಿದ್ದಾರೆ. ವೈದ್ಯರು ಧಾರವಾಡದಿಂದ ಬೆಳಗಾವಿ ಕಡೆಗೆ ಬರುವಾಗ ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.