ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್: ಬೆಂಕಿ ಅವಘಡ

ಕೊಪ್ಪಳ : ಶಾಲೆಯ ಅಡುಗೆ ಕೋಣೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಜಿಲ್ಲೆಯ ಕಾರಟಗಿಯ ರಾಮನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮಾಡುವಾಗ ಪೈಪ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿತ್ತು, ಕೂಡಲೇ ಶಾಲೆಗೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಅಡುಗೆ ಕೋಣೆಯಲ್ಲಿದ್ದಂತಹ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.