ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಮೋದಿ
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪಾಲ್ಗೊಂಡಿದ್ದಾರೆ.
ಪ್ರಯಾಗರಾಜ್‌ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಇದಕ್ಕೂ ಮುನ್ನ ತ್ರಿವೇಣಿ ಸಂಗಮದಲ್ಲಿ ಬೋಟ್‌ನಲ್ಲಿ ಆದಿತ್ಯನಾಥ್ ಅವರ ಜೊತೆ ಮೋದಿ ಅವರು ಕೆಲಕಾಲ ಸಂಚರಿಸಿದರು. ಮೋದಿ ಅವರ ಪುಣ್ಯ ಸ್ನಾನದ ಹಿನ್ನೆಲೆಯಲ್ಲಿ ಪ್ರಯಾಗ್‌ರಾಜ್ ಹಾಗೂ ಕುಂಭನಗರಿಯಲ್ಲಿ ಭಾರಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು.

























