ಮಾತೃಭಾಷೆಯಲ್ಲಿಯೇ ಸಂಪೂರ್ಣ ವಿಫಲ…

0
15

ಪದೇ ಪದೇ ಕೆಎಎಸ್ ಪರೀಕ್ಷಾರ್ಥಿಗಳನ್ನು ಗೊಂದಲಕ್ಕೆ ದೂಡುತ್ತಿರುವ ಬೇಜವಾಬ್ದಾರಿತನ

ಬೆಂಗಳೂರು: ಕೆಪಿಎಸ್‌ಸಿಯ ನಿರಂತರ ಯಡವಟ್ಟುಗಳು, ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ದೋಷಗಳ ಮೂಲಕ ನ್ಯೂನತೆಗಳು ನಿರಂತರ ಬಯಲಾಗುತ್ತಲೇ ಇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ್ಯ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕರ್ನಾಟಕದ ಮಾತೃಭಾಷೆಯಲ್ಲಿಯೇ ಸೂಕ್ತ ಪ್ರಶ್ನೆಗಳನ್ನು ನೀಡುವಲ್ಲಿ ಸಂಪೂರ್ಣ ವಿಫಲವಾಗಿ ಪದೇ ಪದೇ ಕೆಎಎಸ್ ಪರೀಕ್ಷಾರ್ಥಿಗಳನ್ನು ಗೊಂದಲಕ್ಕೆ ದೂಡುತ್ತಿರುವ ಬೇಜವಾಬ್ದಾರಿತನ ಪದೇ ಪದೇ ಮರುಕಳಿಸುತ್ತಿರುವುದು ಕೆಪಿಎಸ್‌ಸಿ ವೈಫಲ್ಯ ಹಾಗೂ ರಾಜ್ಯ ಸರ್ಕಾರದ ಅಸಮರ್ಥ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಯಾವ ಆದೇಶಗಳಿಗೂ ಕ್ಯಾರೆ ಎನ್ನುತ್ತಿಲ್ಲ, ಮುಖ್ಯಮಂತ್ರಿಗಳ ಎಚ್ಚರಿಕೆಗೂ ಕಿಮ್ಮತ್ತಿಲ್ಲದಿರುವುದು ಈ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ ಎನ್ನುವುದು ಬಯಲಾಗುತ್ತಿದೆ.

ಕಠಿಣ ಪರಿಶ್ರಮದಿಂದ ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಸಾವಿರಾರು ಉದ್ಯೋಗಾಕಾಂಕ್ಷಿಗಳ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಕೆಪಿಎಸ್ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಕೆಪಿಎಸ್ಸಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಚ್ಚರ ಎಂದಿದ್ದಾರೆ.

Previous articleಎರಡು ಕನಸಿನ ಪುಷ್ಪಲತಾ ಇನ್ನಿಲ್ಲ
Next articleಅಮೆರಿಕಾದಿಂದ ಭಾರತಕ್ಕೆ ಮರಳಿದ 104 ಅಕ್ರಮ ವಲಸಿಗರು