ಆರಂಭದಿಂದಲೂ ಅರವಿಂದ್ ಕೇಜ್ರಿವಾಲ್ ಹಿನ್ನಡೆ
ನವದೆಹಲಿ: ದೆಹಲಿ ವಿಧಾನಸಭೆ ಫಲಿತಾಂಶ ಇಂದು ಹೊರಬೀಳಲಿದ್ದು ಬೆಳಿಗ್ಗೆ 8ರಿಂದಲೇ ಮತ ಎಣಿಕೆ ಆರಂಭವಾಗಿದೆ,
ಮೊದಲು ಅಂಚೆ ಮತಪತ್ರಗಳನ್ನು ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿತು. ಬಿಗಿ ಭದ್ರತೆಯ ನಡುವೆ 19 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ. ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು. 48 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡರೆ, ಎಎಪಿ 21 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿವೆ. ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುಂದಿದೆ. ಎಎಪಿ ಸಂಚಾಲಕ ಅರವಿಂದ ಕೇಜ್ರವಾಲ್, ಮನೀಷ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಹಿನ್ನಡೆಯಲ್ಲಿದ್ದಾರೆ. ಮುಖ್ಯಮಂತ್ರಿ ಅತಿಶಿ ಮುನ್ನಡೆ ಕಾಯ್ದುಕೊಂಡಿದ್ದಾರೆ.