ಸಂಸತ್​ನಲ್ಲಿ ನಮ್ಮ ಮೆಟ್ರೋ ದರ ಹೆಚ್ಚಳದ ಸದ್ದು

ನವದೆಹಲಿ: ನಮ್ಮ ಮೆಟ್ರೋ ಪ್ರಯಾಣ ದರ ಶೇ.100ರಷ್ಟು ಏರಿಕೆಯಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಇಂದು ಸಂಸತ್ತಿನಲ್ಲಿ ನಡೆದ ಶೂನ್ಯ ವೇಳೆಯಲ್ಲಿ ಮಾತನಾಡಿ ಬೆಂಗಳೂರಿನಲ್ಲಿ ಒಂದು ನಿಲ್ದಾಣದಿಂದ ಇನ್ನೊಂದು ನಿಲ್ದಾಣದ ಅಲ್ಪ ದೂರದ ಪ್ರಯಾಣ ದರ ಶೇ.100ರಷ್ಟು ಏರಿಕೆಯಾಗಿದೆ. ಈ ರೀತಿಯ ದರ ಏರಿಕೆಯನ್ನು ದೇಶದ ಇತರ ನಗರಗಳ ಮೆಟ್ರೋ ದರಕ್ಕೆ ಹೋಲಿಸಿ ನೋಡಿದರೆ ಬೆಂಗಳೂರು ನಮ್ಮ ಮೆಟ್ರೋ ಅತ್ಯಂತ ದುಬಾರಿಯಾಗಿದೆ. ಈ ಮೆಟ್ರೋ ದರ ಏರಿಕೆಯನ್ನು ಪುನರ್ ಪರಿಶೀಲಿಸಬೇಕು ಎಂದು ಮನವಿ ಮಾಡಿದರು.