Home ತಾಜಾ ಸುದ್ದಿ ಪೊಲೀಸ್ ಸಿಬ್ಬಂದಿ ಸಾವು

ಪೊಲೀಸ್ ಸಿಬ್ಬಂದಿ ಸಾವು

0
ಪೊಲೀಸ್ ಸಿಬ್ಬಂದಿ ಸಾವು

ಮಂಗಳೂರು: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೊಲೀಸ್ ಸಿಬ್ಬಂದಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.
ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್(೨೬) ಮೃತಪಟ್ಟ ಪೊಲೀಸ್ ಸಿಬ್ಬಂದಿ. ಅವಿವಾಹಿತನಾಗಿದ್ದ ಅಭಿಷೇಕ್ ಅವರು ೨೦೨೦ರಲ್ಲಿ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯ ಎಚ್.ಸಿ.ಯಾಗಿ ನೇಮಕಗೊಂಡಿದ್ದರು. ಬಳಿಕ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಕಳೆದ ಒಂದು ವರ್ಷದ ಹಿಂದೆ ಬೆನ್ನುಮೂಳೆಯ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಬ್ಲಡ್ ಕ್ಯಾನ್ಸರ್ ಕಂಡು ಬಂದಿತ್ತು.
ಸುಮಾರು 8 ತಿಂಗಳಿನಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ.
ಅಭಿಷೇಕ್ ಅವರ ತಂದೆ ಕೂಡ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಬೆಂಗಳೂರು ನಗರದಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರ ಹುಟ್ಟೂರು ದಾವಣಗೆರೆ ಜಿಲ್ಲೆಯಲ್ಲಿ ಅವರ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.