ಉಡುಪಿ to ಪ್ರಯಾಗ್‌ರಾಜ್‌ ವಿಶೇಷ ರೈಲು: ಇಂದಿನಿಂದ ಟಿಕೆಟ್ ಲಭ್ಯ

train

ಇಂದಿನಿಂದ ಟಿಕೆಟ್ ಲಭ್ಯವಿದ್ದು ರೈಲ್ವೆ ಇಲಾಖೆಯ ವೆಬ್‌ಸೈಟ್ ಅಥವಾ ಆಯಾ ರೈಲು ನಿಲ್ದಾಣಗಳ ಟಿಕೆಟ್ ಕೌಂಟರ್‌ನಲ್ಲಿ ಟಿಕೆಟ್ ಪಡೆದುಕೊಳ್ಳಬಹುದಾಗಿದೆ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳಕ್ಕೆ ಕರಾವಳಿ ಜಿಲ್ಲೆಗಳ ಯಾತ್ರಾರ್ಥಿಗಳಿಗಾಗಿ ವಿಶೇಷ ರೈಲು ಸೇವೆಯ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶೇಷ ರೈಲು ಒದಗಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅರವರಲ್ಲಿ ಮನವಿ ಮಾಡಲಾಗಿತ್ತು, ಇದೀಗ ಅಧಿಕೃತ ಪ್ರಕಟಣೆಯನ್ನು ರೈಲ್ವೆ ಇಲಾಖೆ ಪ್ರಕಟಿಸಿದೆ. ದಿನಾಂಕ ಫೆ. 17ರಂದು ಮಧ್ಯಾಹ್ನ 12.30 ಗಂಟೆಗೆ ಉಡುಪಿಯಿಂದ ಹೊರಟು ಕುಂಭಮೇಳದತ್ತ ಪ್ರಯಾಣ ಬೆಳೆಸಲಿದೆ, ನನ್ನ ಮನವಿಯನ್ನು ಪುರಸ್ಕರಿಸಿದ ಕೇಂದ್ರ ರೈಲ್ವೆ ಇಲಾಖೆ ಸಚಿವರಿಗೆ ವಿಶೇಷ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಫೆ.14ರಂದು ಬೆಳಿಗ್ಗೆಯಿಂದ ಟಿಕೆಟ್ ಲಭ್ಯವಿದ್ದು ರೈಲ್ವೆ ಇಲಾಖೆಯ ವೆಬ್‌ಸೈಟ್ ಅಥವಾ ಆಯಾ ರೈಲು ನಿಲ್ದಾಣಗಳ ಟಿಕೆಟ್ ಕೌಂಟರ್‌ನಲ್ಲಿ ಟಿಕೆಟ್ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ,