ವಡೋದರಾ: 2025ರ ಮಹಿಳಾ ಪ್ರೀಮಿಯರ್ ಲೀಗ್ 3ನೇ ಆವೃತ್ತಿಯ ಉದ್ಘಾಟನೆ ಪಂದ್ಯದಲ್ಲಿ ಆರ್‌ಸಿಬಿ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಕೋತಂಬಿ ಕ್ರೀಡಾಂಗಣದಲ್ಲಿ ಉದ್ಘಾಟನೆ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ಮುಖಾಮುಖಿಯಾಗಿವೆ. ಗುಜರಾತ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡಲಿದ್ದು, ಇಂದಿನ ಮೊದಲ ಪಂದ್ಯದಲ್ಲಿ ಆರ್‌ಸಿಬಿಗೆ ಕಠಿಣ ಸವಾಲು ಎದುರಾಗಿದೆ, ಕೆಲ ಆಟಗಾರರು ಗಾಯದ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಆರ್‌ಸಿಬಿ ನಾಯಕಿ ಸ್ಮೃತಿ ಮಂದಾನ ಮಾನಸಿಕವಾಗಿ ನಾವು ಸಮರ್ಥ ರಾಗಿದ್ದೇವೆ. ಚೆನ್ನಾಗಿ ಆಡುತ್ತೇವೆ ಎಂಬ ಭರವಸೆ ನೀಡಿದ್ದಾರೆ.
