ಸೂಕ್ತ ಸಮಯದಲ್ಲಿ ಹೈಕಮಾಂಡ್‌ನಿಂದ ಸೂಕ್ತ ನಿರ್ಧಾರ…

ಹುಬ್ಬಳ್ಳಿ: ಪಕ್ಷದ ಆಂತರಿಕ ವಿಷಯಗಳ ಕುರಿತು ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಥವಾ ಸಿಎಂ ಬದಲಾವಣೆ ಕುರಿತಂತೆ ಸೂಕ್ತ ಸಮಯದಲ್ಲಿ ಎಲ್ಲರೂಂದಿಗೆ ಚರ್ಚಿಸಿ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ವಿಪ ಸದಸ್ಯ ಸಲೀಂ ಅಹ್ಮದ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಅವರು ತಮ್ಮ ತಮ್ಮ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಪಕ್ಷದ ಒಳಗಿನ ಯಾವುದೇ ನಿರ್ಧಾರವನ್ನು ಕ್ಯಾಬಿನೆಟ್ ಪುನರ್ ರಚನೆ ಸೇರಿದಂತೆ ಪಕ್ಷದೊಳಗಿನ ಎಲ್ಲ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಬಂದಾಗ ಎಲ್ಲ ಸಮೂದಾಯಗಳ ಅಭಿಪ್ರಾಯ ಚರ್ಚಿಸಿ ಅದರ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಇಲ್ಲಿಯವರೆಗೆ ಪಕ್ಷ ನೀಡಿದ ಎಲ್ಲ ಜವಾಬ್ದಾರಿಯನ್ನು ಪ್ರಮಾಣಿಕವಾಗಿ ನಿಭಾಯಿಸಿದ್ದೇನೆ. ಮುಂದೆಯೂ ಮುಂದುವರೆಸುತ್ತೇವೆ ಎಂದು ಸಲೀಂ ಅಹ್ಮದ್ ಹೇಳಿದರು.