ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ
ಬೆಂಗಳೂರು: ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
5 ತಿಂಗಳಿನಿಂದ ಅನ್ನಭಾಗ್ಯದ ಹಣ 3 ತಿಂಗಳಿಂದ ಗೃಹಲಕ್ಷ್ಮಿ ಹಣ ಬಾರದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹಣ ಪಾವತಿ ಮಾಡದೇ ಹೋದರೇ ಪಾವತಿ ಮಾಡುತ್ತೇವೆ. ಆದರೇ ಗ್ಯಾರಂಟಿ ನಿಲ್ಲಿಸೋ ಪ್ರಶ್ನೆಯೇ ಇಲ್ಲ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸುತ್ತೇನೆ ಎಂದರು.