`ಪಿಎಂ ಮೋದಿ ಕೆಳಗಿಳಿಸಿ’

0
19

ಬೆಳಗಾವಿ: ಮೋದಿಯವರನ್ನು ಪ್ರಧಾನ ಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ ಪ್ರಧಾನಿಯಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಕೆಳಗಿಳಿಸಿ ಬೇರೆಯವರನ್ನು ಪ್ರಧಾನಿ ಮಾಡಿದರೆ ಒಳ್ಳೆಯ ಕೆಲಸ ಮಾಡುತ್ತಾರೆ. ನನಗೆ ಇರುವ ಮಾಹಿತಿ ಪ್ರಕಾರ ಪ್ರಧಾನಿ ಬದಲಾಗುತ್ತಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ ಪೈಕಿ ಒಬ್ಬರು ಪ್ರಧಾನಿಯಾಗುತ್ತಾರೆ ಎಂದು ಭವಿಷ್ಯ ನುಡಿದರು.
ನಾನು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ. ಮೋದಿಯನ್ನು ಕೆಳಗಿಳಿಸಿ ಬೇರೆಯವರನ್ನು ಪ್ರಧಾನಮಂತ್ರಿ ಮಾಡಬೇಕು. ನಿತಿನ್ ಗಡ್ಕರಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರನ್ನು ಪ್ರಧಾನಿಯನ್ನಾಗಿ ಮಾಡಿ ಎಂದರು.
ಡಿ.ಕೆ. ಶಿವಕುಮಾರ್ ಅವರಿಗೆ ಎರಡು ಹುದ್ದೆ ಕೊಟ್ಟಿದ್ದಕ್ಕೆ ಸಚಿವ ಕೆ.ಎನ್. ರಾಜಣ್ಣ ಅಸಮಾಧಾನ ವಿಚಾರಕ್ಕೆ ಸಂಬಂಧಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಇಂತಹ ಬಿನ್ನಾಭಿಪ್ರಾಯ ಬಂದಾಗ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದರು.

Previous articleಯುವತಿ ವಿಡಿಯೋ ಚಿತ್ರೀಕರಿಸಿ ಹಣಕ್ಕಾಗಿ ಬೆದರಿಕೆ
Next articleಕಾರವಾರದಲ್ಲಿ ಎನ್‌ಐಎ ಅಧಿಕಾರಿಗಳಿಂದ ಶೋಧ