ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ಜ್ಞಾನೇಶ್ ಕುಮಾರ್ ನೇಮಕ

0
65

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್. ರಾಜೀವ್ ಕುಮಾರ್ ಅವರ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರ ಅಧಿಕಾರಾವಧಿ ಜನವರಿ 26, 2029 ರವರೆಗೆ ಇರುತ್ತದೆ.
1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಶ್ ಕುಮಾರ್, ಸಹಕಾರ, ಸಂಸದೀಯ ವ್ಯವಹಾರಗಳು ಮತ್ತು ರಕ್ಷಣಾ ಮುಂತಾದ ಹಲವಾರು ಸಚಿವಾಲಯಗಳಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ನೇರ ತೆರಿಗೆ ಮಂಡಳಿಯ (ಸಿಬಿಡಿಟಿ) ಅಧ್ಯಕ್ಷರಾಗಿದ್ದ ಸುಶೀಲ್ ಚಂದ್ರ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಆಯೋಗಕ್ಕೆ ಸೇರುವ ಮೊದಲು, ಚಂದ್ರ ಸಿಬಿಡಿಟಿಗೆ ರಾಜೀನಾಮೆ ನೀಡಿದ್ದರು. ಹರ್ಯಾಣ ಮಾಜಿ ಮುಖ್ಯ ಕಾರ್ಯದರ್ಶಿಯಾಗಿದ್ದ ಜೋಶಿ, 2019 ರ ಜನವರಿಯಿಂದ ಕೇಂದ್ರ ನಿಯೋಜನೆಯಲ್ಲಿದ್ದರು. ಜ್ಞಾನೇಶ್ ಕುಮಾರ್ ಗೃಹ ಸಚಿವಾಲಯದಲ್ಲಿದ್ದಾಗ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೇಂದ್ರ ಸರ್ಕಾರ 370ನೇ ವಿಧಿ ರದ್ದು ಮಾಡಿದಾಗ ಗೃಹ ಸಚಿವಾಲಯದಲ್ಲಿ ಜಮ್ಮು ಮತ್ತು ಕಾಶ್ಮೀರ ಭಾಗದ ಉಸ್ತುವಾರಿಯಾಗಿದ್ದರು.

Previous articleಭೀಕರ ಅಪಘಾತ: ವಿದೇಶದಿಂದ ಆಗಮಿಸಿದ್ದ ವ್ಯಕ್ತಿ ಸಾವು
Next articleವಿದೇಶಿ ಬೇಹುಗಾರಿಕೆ: ಎನ್​ಐಎ ಪೊಲೀಸರಿಂದ ಇಬ್ಬರ ಬಂಧನ