ದಾವಣಗೆರೆ: ಹೆಜ್ಜೇನು ದಾಳಿಯಿಂದ ರೈತನೊಬ್ಬ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹುಚ್ಚ ವ್ವನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಹುಚ್ಚವ್ವನಹಳ್ಳಿ ಗ್ರಾಮದ ನಾಗಪ್ಪ(65) ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತ. ಎಂದಿನಂತೆ ಬೆಳಗ್ಗೆ ಜಮೀನಿಗೆ ತೆರಳುತ್ತಿದ್ದಾಗ ಏಕಾಏಕಿ ಹೆಜ್ಜೇನು ಹುಳುಗಳು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅಸ್ವಸ್ಥಗೊಂಡಿದ್ದ ರೈತನನ್ನು ಕೂಡಲೇ ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ರೈತ ಕೊನೆಯುಸಿರೆಳೆದಿದ್ದಾರೆ. ಮೃತ ರೈತನಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ. ಈ ಕುರಿತು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.