ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಬೀದರ್​ನ ಐವರು ಸಾವು

0
22

ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು

ಬೀದರ್: ಉತ್ತರ ಪ್ರದೇಶ ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಉತ್ತರಪ್ರದೇಶದ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ, ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಗಾಡಿಯಲ್ಲಿ ಒಟ್ಟು 12 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ‌ ಮೀಟರ್‌ ದೂರದಲ್ಲಿ ಲಾರಿಗೆ ಹಿಂಬಾಗಕ್ಕೆ ಕ್ರೂಸರ್‌ ಡಿಕ್ಕಿ ಹೊಡೆದಿದ್ದು. ಡಿಕ್ಕಿಯ ರಭಸಕ್ಕೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಲಕ್ಷ್ಮೀ (56), ನೀಲಮ್ಮ (55), ಸಂತೋಷ್‌ಕುಮಾರ್ (42), ಸುನೀತಾ (42) ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

Previous articleಬೋಟ್‌ನಲ್ಲಿ ಅಗ್ನಿ ಅವಘಡ: 15 ಲಕ್ಷ ನಷ್ಟ
Next articleಯತ್ನಾಳ್‌ರಿಂದ ಚಾಮುಂಡಿ ಸನ್ನಿಧಿಯಲ್ಲಿ ಪೂಜೆ: ಚಿಂಚೋಳಿ ತಾಲ್ಲೂಕಿನ ಜನತೆಗೆ ಸಿಹಿ ಸುದ್ದಿ