ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.
ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಅವರ ತಾಯಿ ಸುನಂದಾ ಶೆಟ್ಟಿ, ತಂಗಿ ಶಮಿತಾ ಶೆಟ್ಟಿ ಮತ್ತು ಮಕ್ಕಳು ಜೊತೆರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇತ್ತಿಚೆಗೆ ನಟಿ ಶಿಲ್ಪಾ ಶೆಟ್ಟಿ ಅವರು ಡೈರೆಕ್ಟರ್ ಪ್ರೇಮ್ ಮತ್ತು ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ನಟಿಸುತ್ತಿದ್ದು. ಹಲವು ವರ್ಷಗಳ ಬಳಿಕ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಆಗುತ್ತಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ರಿಲೀಸ್ ಆಗಲಿದೆ.