Home Advertisement
Home ಸುದ್ದಿ ರಾಜ್ಯ ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡಲ್ಲ

ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡಲ್ಲ

0
151
ಯಡಿಯೂರಪ್ಪ

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಅವಕಾಶ ಕಲ್ಪಿಸಿದ ಹೈಕಮಾಂಡ್ ನಿರ್ಧಾರವನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇನೆ. ಬಿಜೆಪಿಯು ಕಾರ್ಯಕರ್ತರನ್ನು ಕೈಬಿಡಲ್ಲ ಎನ್ನುವುದಕ್ಕೆ ನನ್ನದೇ ಉದಾಹರಣೆ. ಯಾವ ಕಾರಣಕ್ಕೂ ಬೇರೆ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಪ್ರವಾಸ ಮಾಡಿ ಸ್ಪಷ್ಟ ಬಹುಮತ ಬರಲು ಸಾಮೂಹಿಕ ನಾಯಕತ್ವದಲ್ಲಿ ನಾವೆಲ್ಲಾ ಒಟ್ಟಾಗಿ ಪ್ರವಾಸ ಮಾಡಲಿದ್ದೇವೆ ಎಂದರು.
ರಾಜ್ಯದಲ್ಲಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಜೊತೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷ ಬಲಪಡಿಸಲು ಶಕ್ತಿಮೀರಿ ಪ್ರಯತ್ನ ನಡೆಸುತ್ತೇನೆ, ಹೈಕಮಾಂಡ್ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ
Previous articleಸಜ್ಜನರ ಸಹವಾಸದ ಮಹತ್ವ
Next article“ಮೇಕ್​ ಇಂಡಿಯಾ ನಂಬರ್​ 1” ಮಿಷನ್​​ಗೆ ಚಾಲನೆ