ಬೆಂಗಳೂರು: ಕರ್ನಾಟಕ ರಾಜ್ಯ ಬಜೆಟಿನಲ್ಲಿ ಕನ್ನಡ ಸಿನೆಮಾಗಳನ್ನು ಪ್ರೋತ್ಸಾಹಿಸಿ ಬೆಳೆಸಲು ತೆಗೆದುಕೊಂಡ ನಿರ್ಧಾರಗಳಿಗೆ ಕರ್ನಾಟಕ ಸರ್ಕಾರಕ್ಕೆ ನನ್ನ ಅಭಿನಂದನೆಗಳು ಎಂದು ನಟ ಶಿವರಾಜಕುಮಾರ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ ಬೆಳೆಸಲು ತೆಗೆದುಕೊಂಡ ನಿರ್ಧಾರಗಳಿಗೆ ಕರ್ನಾಟಕ ಸರ್ಕಾರಕ್ಕೆ ನನ್ನ ಅಭಿನಂದನೆಗಳು. ಚಿತ್ರಮಂದಿರಗಳಲ್ಲಿ ಟಿಕೆಟ್ ದರ ಇಳಿಕೆ, ಕನ್ನಡ ಸಿನಿಮಾಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸಲು ರಾಜ್ಯ ಸರ್ಕಾರದಿಂದ ಹೊಸ ಓಟಿಟಿ, ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲಂ ಸಿಟಿ ನಿರ್ಮಾಣಕ್ಕೆ ಬೆಂಬಲ ನೀಡಿದ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ನನ್ನ ಹಾಗು ಚಿತ್ರರಂಗದ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು. ಶೀಘ್ರವೇ ಈ ಎಲ್ಲಾ ಯೋಜನೆಗಳಿಗೆ ಚಾಲನೆ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.