ನಿನ್ನೆ ಮಾತನಾಡಿದಕ್ಕೆ ಇಂದು ಸಭೆ

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಕಾಲೇಜು ಶಿಕ್ಷಣ ಇಲಾಖೆಯ ಕಾಯಂ ಪ್ರಾಂಶುಪಾಲರ ಹುದ್ದೆ ಖಾಲಿ ಇರುವುದರಿಂದ ಆಗುತ್ತಿರುವ ಶೈಕ್ಷಣಿಕ ಹಿನ್ನಡೆಯ ಬಗ್ಗೆ ನಿನ್ನೆ ಅಧಿವೇಶನದಲ್ಲಿ ಮಾತನಾಡಿದ ಪರಿಣಾಮವಾಗಿ ಇಂದು ಉನ್ನತ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿಗಳು ಸಭೆ ಕರೆದಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.


ನಿನ್ನೆ ಅವರು ವಿಧಾನಸಭೆಯ ಪ್ರಶೋತ್ತರ ಕಲಾಪದಲ್ಲಿ ನೇನಕಾತಿ ಕುರಿತಂತೆ ಪ್ರಶ್ನೆ ಮಾಡಿದ್ದರು, ಉನ್ನತ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದ್ದು, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳ ಪರಿಶೀಲನೆಯ ಹಂತದಲ್ಲಿದೆ. ಈ ಸಂಬಂಧ ಶೀಘ್ರವಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು ರಾಜ್ಯದಲ್ಲಿರುವ ಶಿಕ್ಷಣ ಇಲಾಖಾ ವ್ಯಾಪ್ತಿಗೆ ಬರುವ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿ ಕೆಇಎ ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದ್ದರು.