ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಪೊಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಮಧ್ಯವಯಸ್ಸಿನ ವ್ಯಕ್ತಿ, ಪ್ರಾಂತ್ಯ ಗ್ರಾಮದ ಅಜಂಕಲ್ಲುವಿನ ನಿವಾಸಿ ಪ್ರಕಾಶ್ (೫೭) ಇಂದು ಮಂಗಳೂರು ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ.
ಪ್ರಕಾಶ್ ತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು ವರ್ಷದಿಂದ ಬರುತ್ತಿದ್ದು ಈ ಸಂದರ್ಭ ಸಂತ್ರಸ್ತೆ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿರುತ್ತಾನೆ ಈ ಬಗ್ಗೆ ಸಂತ್ರಸ್ತೆಯ ಹೆತ್ತವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದರು.