ಸಂವಿಧಾನ ಬದಲಾವಣೆ, ಡಿ.ಕೆ. ಶಿವಕುಮಾರ್ ಹೇಳಿಕೆ ಖಂಡಿಸಿ : ಬೃಹತ್ ಪ್ರತಿಭಟನೆ

0
42

ಡಿಕೆಶಿ ಪ್ರತಿಕೃತಿ ದಹಿಸಿ ಬಿಜೆಪಿ ಮುಖಂಡರ ಆಕ್ರೋಶ

ಕಲಬುರಗಿ: ಸಂವಿಧಾನ ಬದಲಾವಣೆಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.
ಜಿಲ್ಲಾ ಬಿಜೆಪಿ ವತಿಯಿಂದ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಹಲಗೆ ಬಾರಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕೃತಿ ದಹಿಸಿ, ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರ ಹಾಗೂ ಡಿ.ಕೆ. ಶಿವಕುಮಾರ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ಕಾಂಗ್ರೆಸ್ ಅವರು ಸಂವಿಧಾರ ರಕ್ಷಣೆ ಮಾಡುವುದಾಗಿ ಹೇಳಿ ಸಂವಿಧಾನಕ್ಕೆ, ಡಾ. ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
.ಭಾರತದ ಪ್ರಜಾತಂತ್ರ ವ್ಯವಸ್ಥೆಯ ಸಾರ್ವಭೌಮ ಎಂದು ಗೌರವಿಸುವ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನೇ ತಿದ್ದುಪಡಿ ಮಾಡಿದರೂ ಸರಿ ಮುಸ್ಲಿಮರಿಗೆ ಮೀಸಲಾತಿ ನೀಡುವುದೇ ನಮ್ಮ ಪ್ರಥಮ ಆದ್ಯತೆ, ದೇಶ, ಸಂವಿಧಾನಕ್ಕಿಂತ ಮುಸ್ಲಿಮರಿಗೆ ಮೀಸಲಾತಿ ಕೊಡುವುದು ನಮ್ಮ ಕರ್ತವ್ಯ ಎಂಬ ಅರ್ಥದಲ್ಲಿ ಡಿಕೆ ಶಿವಕುಮಾರ್ ಕಾಂಗ್ರೆಸ್‌ನ ಮುಖ್ಯ ಅಜೆಂಡಾ ಏನು ಎಂಬುದನ್ನು ಬಹಿರಂಗಪಡಿಸಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ಶಾಸಕ ಬಸವರಾಜ್ ಮತ್ತಿಮಡು, ಡಾ.ಅವಿನಾಶ ಜಾಧವ್, ಮಾಜಿ ಸಂಸದ ಡಾ. ಅವಿನಾಶ ಜಾಧವ್, ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಜಿಲ್ಲಾಧ್ಯಕ್ಷ ಅಶೋಕ ಬಗಲಿ, ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಮುಖಂಡರಾದ ಅವ್ವಣ್ಣ ಮ್ಯಾಕೇರಿ ಇತರರು ಭಾಗವಹಿಸಿದ್ದರು.

Previous articleಮನ್ ಕೀ ಬಾತ್: ನಿಮ್ಮ ಆಲೋಚನೆ ಸಲ್ಲಿಸಿ
Next articleಚಿತ್ರರಂಗದ ಕರಾಟೆ ಲೆಜೆಂಡ್ಸ್ ಶಿಹಾನ್ ಹುಸೈನಿ ನಿಧನ