13 ಜಿಲ್ಲೆಗಳಲ್ಲಿ 4 ದಿನ ಮಳೆ: ಕೆಲವೆಡೆ ಯಲ್ಲೋ ಅಲರ್ಟ್

0
51

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದ್ದು ಬಿರುಗಾಳಿ, ಆಲಿಕಲ್ಲು ಸಹಿತ, ಗುಡುಗು ಮಿಂಚಿನೊಂದಿಗೆ ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಮಳೆ ಆರ್ಭಟಿಸಲಿದ್ದು ಕೆಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆಯಲ್ಲದೆ, ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಮೇತ ಬಿರುಸಿನ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ತಿಳಿಸಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಏಪ್ರಿಲ್ ೫ ರಿಂದ ಬೆಂಗಳೂರು ನಗರ ಸುತ್ತಮುತ್ತಲೂ ಮಳೆಯಾಗಲಿದೆ. ಕೆಲವು ಪ್ರದೇಶದಲ್ಲಿ ಆಲಿಕಲ್ಲು ಮಳೆ ಮತ್ತು ಗಂಟೆಗೆ ೩೦-೪೦ ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದಿದೆ. ಈಗಾಗಲೇ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳ ಭಾಗದಲ್ಲಿ ಬಿರುಸಿನ ಗಾಳಿ, ಆಲಿಕಲ್ಲಿನ ಮಳೆಯಾಗುತ್ತಿದೆ. ಇದು ಇನ್ನು ಎರಡರಿಂದ ಮೂರು ದಿನ ಮುಂದುವರಿಯಲಿದೆ. ಈ ಭಾಗದ ಕೆಲವು ಪ್ರದೇಶಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕೆಲವು ಭಾಗದಲ್ಲಿ ಆಲಿಲ್ಲು ಮಳೆಯಾಗುತ್ತಿದೆ. ಇದರ ಜೊತೆಗೆ ಸಿಡಿಲು ಬಡಿಯುತ್ತಿದೆ. ಇದರಿಂದ ಘಟ್ಟ ಪ್ರದೇಶಗಳಲ್ಲಿ ಸಾಗುವ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Previous articleಪೊಲೀಸರ ಥಳಿತಕ್ಕೆ ಯುವಕ ಸಾವು ಆರೋಪ: ಶಾಸಕ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ
Next articleಭಾರತಕ್ಕೂ ಭೂಕಂಪದ ಭೀತಿ: ತಜ್ಞರಿಂದ ಎಚ್ಚರಿಕೆ