ಚಿಕ್ಕಮಗಳೂರು : ನಾಡ ಬಂದೂಕಿನಿಂದ ಮೂವರನ್ನು ಹತ್ಯೆ ಮಾಡಿದ ಘಟನೆ ಮಂಗಳವಾರ ತಡೆ ರಾತ್ರಿ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಘಟನೆ ನಡೆದಿದೆ
ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಲಾಗಿದೆ. ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗುವಿನ ಕೊಲೆ ನಡೆದಿದೆ.
ಮೃತ ಸಿಂಧು ಗಂಡ ಅವಿನಾಶ್ ಕಾಲಿಗೂ ಗುಂಡೇಟು ತಗಲಿದೆ. ನಾಡ ಬಂದೂಕಿನಿಂದ ಮೂವರನ್ನು ಪೂರ್ಣಪ್ರಜ್ಞಾ ಶಾಲೆಯ ಡ್ರೈವರ್ ರತ್ನಾಕರ್ ಹತ್ಯೆ ಮಾಡಿದ್ದಾನೆ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸೆಲ್ಫಿ ವಿಡಿಯೋ ಮೂಲಕ ಸಂಸಾರದ ನೋವನ್ನು ಕೊಲೆಗಾರ ತೋಡಿಕೊಂಡಿದ್ದಾನೆ
ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮನನೊಂದು ಈ ಅಮಾನುಷ ಕೃತ್ಯ ಎಸಗಿದ್ದಾನೆ