SK Home Ad
Home ತಾಜಾ ಸುದ್ದಿ ಕಾಗಿನೆಲೆ ಶ್ರೀ, ಮಾಜಿ ಸಚಿವ ರವೀಂದ್ರನಾಥ್, ಡಾ.ಎಸ್.ಆರ್. ನಿರಂಜನ್‌ಗೆ ಗೌರವ ಡಾಕ್ಟರೇಟ್ ಪ್ರದಾನ

ಕಾಗಿನೆಲೆ ಶ್ರೀ, ಮಾಜಿ ಸಚಿವ ರವೀಂದ್ರನಾಥ್, ಡಾ.ಎಸ್.ಆರ್. ನಿರಂಜನ್‌ಗೆ ಗೌರವ ಡಾಕ್ಟರೇಟ್ ಪ್ರದಾನ

0
147

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಜ್ಞಾನ ಸೌಧದ ಆವರಣದಲ್ಲಿ ಬುಧವಾರ ನಡೆದ 12ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ರೈತಪರ ಹೋರಾಟ ಮಾಡಿದ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರು ರಾಜಕೀಯ ಕ್ಷೇತ್ರದಲ್ಲಿ ಮಾಡಿದ ಸೇವೆ ಗುರುತಿಸಿ ಗೌರವ ಡಾಕ್ಟರೇಟ್ ನೀಡಿದರೆ, ಶಿಕ್ಷಣ ಕ್ಷೇತ್ರದಲ್ಲಿ ಅಪಾರವಾದ ಸೇವೆ ಮಾಡಿದ ಎಸ್.ಆರ್.ನಿರಂಜನ್, ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಕಾಗಿನೆಲೆ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.