ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ತುಟ್ಟಿ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ: ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರ ಹಾಲಿನ ಬೆಲೆ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಮಾಡಿದ ಬೆನ್ನಲ್ಲೆ, ಕೇಂದ್ರ ಬಿಜೆಪಿ ಸರ್ಕಾರ ಇದೀಗ ಡಿಸೇಲ್, ಪೆಟ್ರೋಲ್ ಬೆಲೆಯನ್ನು ಎರಡು ರೂ. ಹೆಚ್ಚಳ ಹಾಗೂ ಅಡುಗೆ ಅನಿಲ ಬೆಲೆಯನ್ನು 50 ರೂ. ಹೆಚ್ಚಿನ ಜನಸಾಮಾನ್ಯರನ್ನು ಬಾನಲೆಯಿಂದ ಬೆಂಕಿಗೆ ದೂಡಿದೆ.
ಗೃಹ ಬಳಕೆಯ ಎಲ್‌ಪಿಜಿ ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಿಸಿರುವುದಾಗಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ, ಇದರೊಂದಿಗೆ ಕೇಂದ್ರ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರೂ ಹೆಚ್ಚಿಸಲಾಗಿದ್ದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ನಾಳೆಯಿಂದ ಜಾರಿಗೆ ಬರಲಿದೆ. ಸರ್ಕಾರ ಹೊರಡಿಸಿದ ಆದೇಶದಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂ. ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ. ಹೆಚ್ಚಿಸಲಾಗಿದೆ ಎಂದು ತಿಳಿಸಲಾಗಿದೆ.