ಪ್ರಥಮ ಸ್ಥಾನ ಪಡೆದ ಸಂಜನಾಬಾಯಿ, ಅಮೂಲ್ಯ, ದೀಪಶ್ರೀ

0
15

ಹುಬ್ಬಳ್ಳಿ: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮೂರು ವಿಭಾಗಗಳಲ್ಲಿ ವಿದ್ಯಾರ್ಥಿನಿಯರೇ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್. ಸಂಜನಾಬಾಯಿ 597 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್​ನ ಕೆನರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಶ್ರೀ ಎಸ್. 599 ಅಂಕಗಳಿಸುವ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ​ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 597 ಅಂಕಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.

Previous articleಪಿಯು ಫಲಿತಾಂಶ: ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌
Next articleಪಿಯು ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗದ ದೀಕ್ಷಾ ಪ್ರಥಮ