ಬೆಂಗಳೂರು: ಐಪಿಎಲ್ 2025ರ ಆವೃತ್ತಿಯ 28ನೇ ಪಂದ್ಯದಲ್ಲಿ ಭಾನುವಾರ ಆರ್‌ಸಿಬಿ, ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ.
ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3.30ಕ್ಕೆ ಈ ಪಂದ್ಯ ಆರಂಭವಾಗಲಿದ್ದು. ಈ ಆವೃತ್ತಿಯಲ್ಲಿ ಆರ್‌ಸಿಬಿ ಮೊದಲ ಬಾರಿ ಮಧ್ಯಾಹ್ನದ ಪಂದ್ಯ ಆಡಲಿದೆ, ಹಾಗೂ ಈ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ, 2011 ರಿಂದ ಐಪಿಎಲ್‌ನಲ್ಲಿ ಗೋ ಗ್ರೀನ್ ಅಭಿಯಾನ ಅರಂಭಿಸಿರುವ ಆರ್‌ಸಿಬಿ ಪ್ರತಿ ಸೀಸನ್‌ಲ್ಲಿ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಾ ಬಂದಿದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಕಾಳಜಿ ಮೂಡಿಸುವುದೇ ಆಗಿದೆ. ಮರಗಳನ್ನು ಉಳಿಸಿ-ಬೆಳೆಸಿ ಎಂಬ ಸಂದೇಶ ಸಾರಲು ಆರ್‌ಸಿಬಿ ಗ್ರೀನ್ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿಯುತ್ತದೆ. ಆದರೆ, 2021 ರ ಐಪಿಎಲ್ ವೇಳೆ ಆರ್‌ಸಿಬಿ ಗ್ರೀನ್ ಜೆರ್ಸಿ ಬದಲಿಗೆ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿದಿತ್ತು ಎಂಬುದು ವಿಶೇಷ. ಏಕೆಂದರೆ ಆ ಸಮಯ ಕೊರೋನಾ ವಾರಿಯರ್ಸ್‌ಗೆ ಗೌರವ ಸೂಚಿಸುವ ಸಲುವಾಗಿ ಆರ್‌ಸಿಬಿ ಪಿಪಿಐ ಕಿಟ್ ಬಣ್ಣದ ಜೆರ್ಸಿಯಲ್ಲಿ ಕೆಕೆಆರ್ ವಿರುದ್ಧ ಪಂದ್ಯವಾಡಿತ್ತು. ತವರಿನಲ್ಲಿ ಎರಡೂ ಪಂದ್ಯ ಸೋತರೂ ತವರಿನ ಹೊರಗೆ ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದೇ ಆತ್ಮವಿಶ್ವಾಸದಿಂದೇ ಜೈಪುರದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಇನ್ನು ಈ ಪಂದ್ಯದಲ್ಲಿ ಲಿಯಾಮ್ ಬದಲಾಗಿ ವೆಸ್ಟ್ ಇಂಡೀಸ್ ದೈತ್ಯ ರೊಮಾರಿಯೋ ಶೆಫರ್ಡ್ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.