ದಾವಣಗೆರೆ: ವಿನೋಬನಗರದ ಪಿ.ಬಿ.ರಸ್ತೆಯಲ್ಲಿರುವ ಶ್ರೀ ಶೈಲ ಪೀಠ(ಶ್ರೀ ಜಗದ್ಗುರು ಪಂಚಾಚಾರ್ಯ ಮಂದಿರ)ದಲ್ಲಿ ಭಾನುವಾರ ಶ್ರೀ ಗುರು ದೊಡ್ಡ ಬಸವೇಶ್ವರ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ಗುರು ಚರಂತಪ್ಪಜ್ಜ ಮಹಾಸ್ವಾಮಿಗಳ 21ನೇ ಸ್ಮರಣೋತ್ಸವ ಹಾಗೂ ಚರಂತಾರ್ಯ ಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ‘ ಚರಂತಾರ್ಯಶ್ರೀ ಪ್ರಶಸ್ತಿಯನ್ನು ಶ್ರೀ ಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ನಂದಿಪುರ ಪುಣ್ಯಕ್ಷೇತ್ರದ ಡಾ.ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಯರಗುಂಟೆ ಶ್ರೀ ಪರಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಶಾಮನೂರು ಶಿವಶಂಕರಪ್ಪ, ಚರಂತಾರ್ಯ ಶ್ರೀ ಪ್ರಶಸ್ತಿ ಪ್ರದಾನ ಮಾಡಿದ್ದು, ಬಹಳ ಖುಷಿ ನೀಡಿದೆ. ಈ ಪ್ರಶಸ್ತಿಯಿಂದ ಸಮಾಜ ಸಂಘಟಿಸುವ ಜವಾಬ್ದಾರಿ ಹೆಚ್ಚಿಸಿದೆ ಎಂದರು.
ಈ ವೇಳೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಹಂಪಿ ಕನ್ನಡ ವಿವಿಯ ಸಹಾಯಕ ಕುಲಸಚಿವ ಡಾ.ಎಂ.ಎಂ. ಶಿವಪ್ರಕಾಶ್, ಎಚ್.ಎಂ. ಗುರುಬಸವರಾಜಯ್ಯ, ಎಸ್.ವಿ. ಪಾಟೀಲ ಗುಂಡೂರು ಸೇರಿದಂತೆ ಇನ್ನಿತರರಿದ್ದರು.