ಬೆಂಗಳೂರು: ಖಾಸಗಿ ವಾಣಿಜ್ಯ ಬಂದರು ಸೇರಿದಂತೆ ಕೆಲ ಯೋಜನೆ ಬಿಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಮೀನುಗಾರರ ಸಂಘಟನೆಯ ನಿಯೋಗದವರು ಮನವಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ಖಾಸಗಿ ವಾಣಿಜ್ಯ ಬಂದರು ಸ್ಥಾಪನೆ ಮತ್ತು ಚತುಷ್ಪಥ ರಸ್ತೆ ಹಾಗೂ ರೈಲು ಮಾರ್ಗ ನಿರ್ಮಾಣ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ರಾಷ್ಟ್ರೀಯ ಮೀನುಗಾರರ ಸಂಘಟನೆಯ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಮನವಿಪತ್ರ ಸಲ್ಲಿಸಿದರು.
