Home ತಾಜಾ ಸುದ್ದಿ ಬಂಟ್ವಾಳದ ಯುವಕ ದಕ್ಷಿಣ ಆಫ್ರಿಕಾದಲ್ಲಿ ಸಾವು

ಬಂಟ್ವಾಳದ ಯುವಕ ದಕ್ಷಿಣ ಆಫ್ರಿಕಾದಲ್ಲಿ ಸಾವು

0
ಬಂಟ್ವಾಳದ ಯುವಕ ದಕ್ಷಿಣ ಆಫ್ರಿಕಾದಲ್ಲಿ ಸಾವು

ಮಂಗಳೂರು: ದಕ್ಷಿಣ ಅಫ್ರಿಕಾಕ್ಕೆ ಉದ್ಯೋಗಕ್ಕೆ ತೆರಳಿದ್ದ ಯುವಕನೊಬ್ಬ ಅಲ್ಲಿ ಅಕಾಲಿಕವಾಗಿ ಮೃತಪಟ್ಟಿದ್ದು, ಇಂದು ಮೃತ್ಯದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ನರಿಕೊಂಬು ಗ್ರಾಮ ನಿವಾಸಿ ರವಿ ಸಪಲ್ಯ ಅವರ ಪುತ್ರ ರಜತ್(೨೫) ಮೃತಪಟ್ಟ ಯುವಕ. ಕಳೆದ ಕೆಲ ಸಮಯಗಳಿಂದ ಆತ ದಕ್ಷಿಣ ಆಫ್ರಿಕಾದಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದು, ಎ. ೫ರಂದು ಅಕಾಲಿಕವಾಗಿ ಮೃತಪಟ್ಟಿದ್ದನು. ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಸಂಪರ್ಕ ಸಾಧಿಸಿ ಮೃತದೇಹವನ್ನು ಊರಿಗೆ ತರಲು ಸಹಕರಿಸಿದ್ದರು.