ಜಾತಿ ಮರುಗಣತಿಗೆ ಶ್ರೀಗಳ ಆಗ್ರಹ

0
19

ಹುಬ್ಬಳ್ಳಿ: ಜಾತಿ ಗಣತಿಯನ್ನು ಮರು ನಡೆಸುವಂತೆ ಉತ್ತರ ಕರ್ನಾಟಕ ಭಾಗದ ಹಲವು ಪೀಠಾಧಿಪತಿಗಳು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಜಾರಿಗೊಳಿಸಲು ತರಾತುರಿ ನಡೆಸಿರುವ ಜಾತಿ ಗಣತಿ ವರದಿ ದೋಷಪೂರಿತವಾಗಿದೆ. ಈ ವರದಿಯಿಂದ ಲಿಂಗಾಯತರಿಗೆ ಅನ್ಯಾಯವಾಗಲಿದೆ ಎಂದು ಗದುಗಿನ ಜ.ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದ್ದಾರೆ.
ಕರ್ನಾಟಕದಲ್ಲಿ ಲಿಂಗಾಯತರು ಬಹು ಸಂಖ್ಯಾತರಿದ್ದಾರೆ. ನಂತರದ ಒಕ್ಕಲಿಗರು ಸೇರಿದಂತೆ ವಿವಿಧ ಜಾತಿಯವರಿದ್ದಾರೆ. ಲಿಂಗಾಯತರ ಜನಸಂಖ್ಯೆ ಅಂದಾಜಿನ ಪ್ರಕಾರ ೧ ಕೋಟಿ ೫೦ ಲಕ್ಷಕ್ಕೂ ಹೆಚ್ಚಿದೆ. ಆದರೆ ವರದಿಯಲ್ಲಿ 72 ಲಕ್ಷಕ್ಕೆ ಇಳಿಸಿದ್ದು ಅತ್ಯಂತ ಆಘಾತಕಾರಿ ಎಂದರು.
ಜಾತಿ ಗಣತಿ ವರದಿ ಬಿಡುಗಡೆಗೆ ಅಖಿಲ ಕರ್ನಾಟಕ ವಿಶ್ವಬ್ರಾಹ್ಮಣ ಮಠಾಧಿಪತಿಗಳ ಹಾಗೂ ಪೀಠಾಧಿಪತಿಗಳ ಒಕ್ಕೂಟದ ಗೌರವಾಧ್ಯಕ್ಷ ಅರೆಮಾದನಹಳ್ಳಿಯ ಶಿವಸುಜ್ಞಾನತೀರ್ಥ ಸ್ವಾಮೀಜಿ ಬಾಗಲಕೋಟೆಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ವರದಿಯಲ್ಲಿ ವಿಶ್ವಕರ್ಮ ಜನಾಂಗದ ಸಂಖ್ಯೆಯನ್ನು ೧೫ ಲಕ್ಷವೆಂದು ಹೇಳಲಾಗುತ್ತಿದೆ. ಆದರೆ, ಇದು ಸತ್ಯಕ್ಕೆ ದೂರವಾದದ್ದು. ಸರಿಯಾಗಿ ಗುರುತಿಸದೇ ಯಾವುದೋ ಅಂದಾಜಿನಲ್ಲಿ ಸಂಖ್ಯೆ ದಾಖಲಿಸಲಾಗಿದೆ ಎಂದು ಟೀಕಿಸಿದ್ದಾರೆ.

Previous articleಜಾತಿ ಗಣತಿ: ಶೀಘ್ರದಲ್ಲೇ ವಿಶೇಷ ಅಧಿವೇಶನ
Next articleಜಾತಿ ಗಣತಿ ಸಮೀಕ್ಷೆ ಹಣವೂ ಲೂಟಿ