ಕರ್ನಾಟಕದಲ್ಲಿ ರೋಹಿತ್ ವೇಮುಲಾ ಕಾಯ್ದೆ: ಸಿಎಂಗೆ ರಾಹುಲ್‌ ಪತ್ರ

0
41

2016 ರಲ್ಲಿ ಜಾತಿ ಆಧಾರಿತ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಹೆಸರಿನಲ್ಲಿ ‘ರೋಹಿತ್ ಕಾಯ್ದೆ’ ಎಂದು ಕರೆಯಲ್ಪಡುವ ಶಾಸನದ ಮೂಲಕ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ.

ನವದೆಹಲಿ: ಕರ್ನಾಟಕದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರವು ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪತ್ರ ಬರೆದಿದ್ದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಜಾತಿ ತಾರತಮ್ಯವನ್ನು ಹೋಗಲಾಡಿಸಲು ಮತ್ತು ವಂಚಿತರು ಸಬಲರಾಗಲು ಸಾಧ್ಯ ಎಂದು ತೋರಿಸಿದ್ದರು. ಆದರೆ ದಶಕಗಳ ನಂತರವೂ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಜಾತಿ ತಾರತಮ್ಯವನ್ನು ಎದುರಿಸುತ್ತಿರುವುದು ಬಹಳ ದುರದೃಷ್ಟಕರ.ಈ ತಾರತಮ್ಯವು ರೋಹಿತ್ ವೇಮುಲಾ, ಪಾಯಲ್ ತಡ್ವಿ ಮತ್ತು ದರ್ಶನ್ ಸೋಲಂಕಿಯಂತಹ ಭರವಸೆಯ ವಿದ್ಯಾರ್ಥಿಗಳ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಇಂತಹ ಭಯಾನಕ ಘಟನೆಗಳನ್ನು ಯಾವುದೇ ಬೆಲೆ ತೆತ್ತಾದರೂ ಸಹಿಸಲು ಸಾಧ್ಯವಿಲ್ಲ. ಈ ಅನ್ಯಾಯವನ್ನು ಸಂಪೂರ್ಣವಾಗಿ ನಿಲ್ಲಿಸುವ ಸಮಯ ಈಗ ಬಂದಿದೆ ಎಂದಿದ್ದಾರೆ.

Previous articleಸ್ವಾಮಿಜಿಗಳಿಗೆ ಬೆಂಬಲ ಸೂಚಿಸಿದ ಅವಳಿ ತಾಲೂಕು ಪಂಚಮಸಾಲಿ ಮುಖಂಡರು
Next articleಅಕ್ರಮ ಸಂಬಂಧಕ್ಕಾಗಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ